ಯೆಹೆಜ್ಕೇಲನು 34:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತೋಟದ ಮರಗಳು ಹಣ್ಣುಬಿಡುವವು; ಹೊಲಗಳು ಒಳ್ಳೆಯ ಬೆಳೆಕೊಡುವವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಗೂಟಗಳನ್ನು ನಾನು ಮುರಿದುಹಾಕಿ ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಹೊಲದಲ್ಲಿ ಬೆಳೆಯುವ ಮರಗಳು ಫಲವನ್ನಿಯುವವು. ಭೂಮಿಯು ಬೆಳೆಯನ್ನು ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವರ ಮೇಲಿರುವ ನೊಗಗಳನ್ನು ನಾನು ಮುರಿದುಬಿಡುವೆನು. ಅವರನ್ನು ಗುಲಾಮರನ್ನಾಗಿ ಮಾಡಿದ ದೇಶದವರ ಶಕ್ತಿಯನ್ನೆ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು. ಅಧ್ಯಾಯವನ್ನು ನೋಡಿ |
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”