Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ನೀವು ನನ್ನ ಕುರಿಗಳು, ಹಸಿರುಗಾವಲಿನ ಕುರಿಗಳು. ನೀವು ಮಾನವರಷ್ಟೇ. ನಾನು ನಿಮ್ಮ ದೇವರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀವು ನನ್ನ ಕುರಿಗಳು, ನನ್ನ ಹುಲ್ಲುಗಾವಲಿನ ಕುರಿಗಳು, ಮತ್ತು ನಾನು ನಿಮ್ಮ ದೇವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:31
16 ತಿಳಿವುಗಳ ಹೋಲಿಕೆ  

ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.”


ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.


“ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು