Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕುರುಬರೇ ಇಲ್ಲವಾದ್ದರಿಂದ ಎತ್ತರವಾದ ಎಲ್ಲಾ ಬೆಟ್ಟಗುಡ್ಡಗಳ ಮೇಲೆ ನನ್ನ ಮಂದೆಯು ಅಲೆದಾಡಿತು; ಭೂಮಂಡಲದ ಎಲ್ಲಾ ಕಡೆಗಳಲ್ಲಿ ಚದರಿ ಹೋಯಿತು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:6
15 ತಿಳಿವುಗಳ ಹೋಲಿಕೆ  

ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


“‘ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ,


ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.


ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.


ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು