Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:15
16 ತಿಳಿವುಗಳ ಹೋಲಿಕೆ  

ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.


ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.


ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”


“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.


“ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು