Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಸೇಯೀರ್‍ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳುಪಾಳುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಅದಕ್ಕೆ ಹೇಳು: “‘ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ಶಿಕ್ಷಿಸುತ್ತೇನೆ. ನಾನು ನಿನ್ನನ್ನು ಬಂಜರು ಭೂಮಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:3
18 ತಿಳಿವುಗಳ ಹೋಲಿಕೆ  

ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.


“ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು.


ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”


‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.


“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,


ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”


ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.


ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”


“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು