Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಫಲಭರಿತವಾಗುವುವು. ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮಸ್ಥಿತಿಗೆ ತರುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:11
33 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.


ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.


ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.


ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.


ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”


ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.


ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.


ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.


ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.


ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.


ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.


ನಿಮ್ಮ ಸಹೋದರರನ್ನು “ಅಮ್ಮಿ” ಎಂದು, ನಿಮ್ಮ ಸಹೋದರಿಯರನ್ನು “ರುಹಾಮ” ಎಂದು ಕರೆಯಿರಿ.


“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.


ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು