ಯೆಹೆಜ್ಕೇಲನು 36:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಯೇಲರೇ, ನಿನ್ನಲ್ಲಿ ಸಂಚರಿಸುತ್ತಾ, ನಿನ್ನನ್ನು ಸೊತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನುಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲ್ಯರೇ ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವಾಸ್ತ್ಯವಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನ್ನು ನಿನ್ನ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವೆ. ಅವರ ಮಕ್ಕಳನ್ನು ನೀನು ಮತ್ತೆಂದಿಗೂ ತೆಗೆದುಹಾಕುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ. ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.