Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ; ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡದಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇನ್ನು ಮುಂದೆ ನೀನು ನರಭಕ್ಷಕನಾಗುವದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡದಿರುವಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಇನ್ನು ಮುಂದೆ ನೀನು ಜನರನ್ನು ನಾಶಮಾಡುವುದಿಲ್ಲ. ಅವರ ಮಕ್ಕಳನ್ನು ನೀನು ತೆಗೆದುಬಿಡುವುದಿಲ್ಲ.” ಇದು ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಇನ್ನು ಮೇಲೆ ನೀನು ಮನುಷ್ಯರನ್ನು ನುಂಗುವುದಿಲ್ಲ. ಇನ್ನು ಮೇಲೆ ನಿನ್ನ ಜನಾಂಗದವರನ್ನೂ ಮಕ್ಕಳಿಲ್ಲದವರನ್ನಾಗಿ ಮಾಡುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:14
6 ತಿಳಿವುಗಳ ಹೋಲಿಕೆ  

ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ” ಎಂದು ನಿನ್ನನ್ನು ಬಯ್ಯುತ್ತಾರೆ.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು