ಯೆಹೆಜ್ಕೇಲನು 36:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” ಅಧ್ಯಾಯವನ್ನು ನೋಡಿ |