ಯೆಹೆಜ್ಕೇಲನು 36:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿವಿುತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿವಿುತ್ತವೇ ಈ ರಕ್ಷಣಕಾರ್ಯವನ್ನು ಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ಇಸ್ರೇಲರಿಗೆ ಹೀಗೆ ಹೇಳು: ‘ಇಸ್ರೇಲರೇ, ನೀವು ಹೋದ ಕಡೆಗಳಲ್ಲೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದ್ದೀರಿ. ನಾನು ಇದನ್ನು ನಿಲ್ಲಿಸುವುದಕ್ಕೆ ಎನುಬೇಕಾದರೂ ಮಾಡುತ್ತೇನೆ. ಇಸ್ರೇಲೇ, ನಾನು ಈ ಕಾರ್ಯವನ್ನು ನಿನ್ನ ಹೆಸರಿಗೋಸ್ಕರ ಮಾಡದೆ ನನ್ನ ಪರಿಶುದ್ಧ ಹೆಸರಿನ ನಿಮಿತ್ತ ನಾನು ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |