Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವುಗಳಿಗೆ ನಿಶ್ಚಿತವಾಗುವದು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:23
26 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


“ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.


ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು