Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:27
33 ತಿಳಿವುಗಳ ಹೋಲಿಕೆ  

ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ.


ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.


ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.


ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!


ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು