Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ನಿಮ್ಮನ್ನು ನಿಮ್ಮ ಎಲ್ಲಾ ಹೊಲಸಿನಿಂದ ಉದ್ಧರಿಸಿ ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ಹೇಳಿದ್ದೇನೆಂದರೆ, “ಅದೇ ಸಮಯದಲ್ಲಿ ನೀನು ಅಶುದ್ಧರಾಗದ ಹಾಗೇ ನಾನು ನೋಡಿಕೊಳ್ಳುವೆನು. ಬೀಜ ಬೆಳೆಯಲು ನಾನು ಆಜ್ಞಾಪಿಸುವೆನು. ನಿಮಗೆ ಹಸಿವೆಯಾಗಲು ಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು. ಬೆಳೆ ಬೆಳೆಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:29
24 ತಿಳಿವುಗಳ ಹೋಲಿಕೆ  

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.


ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.


ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.


ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.


ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.


“‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.


ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು