ಯೆಹೆಜ್ಕೇಲನು 36:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದೀರಲ್ಲಾ! ಹರಟೆಗಾರರ ಬಾಯಿಗೆ ಬಿದ್ದು ಜನರ ದೂಷಣೆಗೆ ಗುರಿಯಾಗಿದ್ದೀರಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಆದ್ದರಿಂದ ಹೋಗಿ ಇಸ್ರೇಲಿನ ಪರ್ವತಗಳಿಗೆ ನನ್ನ ಪರವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನ್ನ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಬೇರೆಯವರ ವಶವಾಗಬೇಕೆಂಬದಾಗಿ ಹೀಗೆ ಮಾಡಿದರು. ಜನರು ನಿನ್ನ ವಿಷಯವಾಗಿ ಗುಜುಗುಜು ಮಾತನಾಡಿದರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ನೀನು ಪ್ರವಾದಿಸಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರು ನಿನ್ನನ್ನು ಹಾಳು ಮಾಡಿ ಎಲ್ಲಾ ಕಡೆಗಳಿಂದಲೂ ನಿನ್ನನ್ನು ತುಳಿದುಬಿಟ್ಟರು. ನೀವು ಇತರ ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಗಾರರ ಬಾಯಿಗೆ ಬಿದ್ದು ಜನರ ನಿಂದೆಗೆ ಗುರಿಯಾಗಿದ್ದೀರಿ. ಅಧ್ಯಾಯವನ್ನು ನೋಡಿ |