Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆಗ ಜನರು, ‘ಕಾಡಾಗಿದ್ದ ಈ ನಾಡು ಏದೆನ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ!’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:35
15 ತಿಳಿವುಗಳ ಹೋಲಿಕೆ  

ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.


ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.”


ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು