Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು; ನಿಮ್ಮಲ್ಲಿ ಗೆಯ್ಯುವರು, ಬಿತ್ತುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನಿನ್ನೊಂದಿಗಿದ್ದು ಸಹಾಯಮಾಡುತ್ತೇನೆ. ಜನರು ನಿನ್ನ ನೆಲವನ್ನು ಉಳುವರು; ಬೀಜವನ್ನು ಬಿತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿಮ್ಮವನಾಗಿದ್ದೇನೆ ನಾನು ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ಉಳುಮೆ ಮಾಡಿ ಬಿತ್ತಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:9
13 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”


ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.


ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.


ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.


ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”


ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು