Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ತಗ್ಗಿನಲ್ಲಿ ಇಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಶಕ್ತಿಯು ನನ್ನ ಮೇಲೆ ಬಂದಿತು. ಯೆಹೋವನ ಆತ್ಮವು ನನ್ನನ್ನು ನಗರದೊಳಗಿಂದ ಎತ್ತಿಕೊಂಡು ತಗ್ಗಿನ ಮಧ್ಯಕ್ಕೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:1
19 ತಿಳಿವುಗಳ ಹೋಲಿಕೆ  

ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.


ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.


ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.


ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.


ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ‘ಸಂಹಾರದ ತಗ್ಗು’ ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.


ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.


ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.


ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು