ಯೆಹೆಜ್ಕೇಲನು 37:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’ ಅಧ್ಯಾಯವನ್ನು ನೋಡಿ |