ಯೆಹೆಜ್ಕೇಲನು 37:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜನರೇ, ನೋಡಿರಿ, ನಾನು ನಿಮ್ಮ ಗೋರಿಗಳನ್ನು ತೆರೆದು ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ ಇಸ್ರಾಯೇಲ್ ದೇಶಕ್ಕೆ ಸೇರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ನನ್ನ ಪರವಾಗಿ ಅವರೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು ನಿಮ್ಮನ್ನು ಹೊರತಂದು ನಿಮ್ಮ ಸ್ವದೇಶವಾದ ಇಸ್ರೇಲಿಗೆ ನಿಮ್ಮನ್ನು ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ಅಧ್ಯಾಯವನ್ನು ನೋಡಿ |