ಯೆಹೆಜ್ಕೇಲನು 37:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಹೊಗಿಸಿ ನಿಮ್ಮನ್ನು ಬದುಕಿಸಿ ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು ನಡಿಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಯೆಹೋವನ ಸಂಕಲ್ಪ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ” ಅಧ್ಯಾಯವನ್ನು ನೋಡಿ |