ಯೆಹೆಜ್ಕೇಲನು 37:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ - ಯೆಹೂದದ್ದು, ಯೆಹೂದಕ್ಕೆ ಸೇರಿದ ಇಸ್ರಾಯೇಲ್ಯರದು ಎಂದು ಬರೆದು ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ - ಯೋಸೇಫಿನದು, ಎಫ್ರಾಯೀವಿುನದು ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲ್ಯರದು ಎಂದು ಬರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನರಪುತ್ರನೇ, ಒಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ. ಆಮೇಲೆ ಇನ್ನೊಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯಿಮನ ಈ ದಂಡವು ಯೋಸೇಫನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಯೆಹೂದನದು ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು,’ ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯೀಮಿನ ಕೋಲು ಯೋಸೇಫನಿಗೂ ಅವನ ಜೊತೆಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು,’ ಎಂದು ಬರೆದಿಡು. ಅಧ್ಯಾಯವನ್ನು ನೋಡಿ |