ಯೆಹೆಜ್ಕೇಲನು 37:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ನೀನು ಅವರಿಗೆ, “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ಇಗೋ, ಎಫ್ರಯಿಮು ಹಿಡಿದಿರುವ ದಂಡವನ್ನು ಅಂದರೆ, ಜೋಸೆಫನ ಮತ್ತು ಜೋಸೆಫನಿಗೆ ಸೇರಿದ ಇಸ್ರಯೇಲ್ ಕುಲಗಳ ದಂಡವನ್ನು ನಾನು ತೆಗೆದು ಜುದೇಯದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು’ ಎಂಬುದನ್ನು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ದಂಡವನ್ನು ನಾನು ತೆಗೆದು ಯೆಹೂದದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು ಎಂಬದನ್ನು ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರಿಗೆ ಹೀಗೆ ಹೇಳು: ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಯೋಸೇಫನ ದಂಡವನ್ನು ಎಫ್ರಾಯೀಮ್ ಮತ್ತು ಅವನ ಸ್ನೇಹಿತರಾದ ಇಸ್ರೇಲರ ಕೈಯಿಂದ ತೆಗೆದುಕೊಂಡು ಅದನ್ನು ಯೆಹೂದದ ದಂಡದೊಂದಿಗೆ ಇಟ್ಟು ಒಂದೇ ದಂಡವಾಗುವಂತೆ ಮಾಡುವೆನು. ಅವು ನನ್ನ ಕೈಯಲ್ಲಿ ಒಂದೇ ದಂಡವಾಗುತ್ತವೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು. ಅಧ್ಯಾಯವನ್ನು ನೋಡಿ |