Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದನ್ನೂ ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಇಸ್ರಾಯೇಲ್ಯರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ ಸ್ವದೇಶಕ್ಕೆ ಕರತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು: ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸ್ವದೇಶಕ್ಕೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:21
34 ತಿಳಿವುಗಳ ಹೋಲಿಕೆ  

“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.


‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.


ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.


“‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.


ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.


ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.


ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.


ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.


ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.’”


ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.


ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.


ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.


ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.


ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.


“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು