Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ ಭಿನ್ನರಾಜ್ಯದವರಾಗಿಯೂ ಇರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:22
32 ತಿಳಿವುಗಳ ಹೋಲಿಕೆ  

“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.


ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.


ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


“ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.


ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.


ಆ ಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.


ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಕೂಡಲೆ ಯೆಹೂದಕ್ಕೂ, ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು “ಒಗ್ಗಟ್ಟು” ಎಂಬ ನನ್ನ ಎರಡನೆಯ ಕೋಲನ್ನು ಮುರಿದುಬಿಟ್ಟೆನು.


ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು