ಯೆಹೆಜ್ಕೇಲನು 37:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ನನ್ನನ್ನು - ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ ಎಂದು ಕೇಳಲು ನಾನು - ಕರ್ತನಾದ ಯೆಹೋವನೇ, ನೀನೇ ಬಲ್ಲೆ ಎಂದುತ್ತರಕೊಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ನನ್ನ ಒಡೆಯನಾದ ಯೆಹೋವನು ನನ್ನೊಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಬಂದೀತೋ?” ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಬಲ್ಲೆ. ಈ ಪ್ರಶ್ನೆಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು. ಅಧ್ಯಾಯವನ್ನು ನೋಡಿ |