Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಶೆಬದವರೂ ದೆದಾನಿನವರೂ ತಾರ್ಷೀಷಿನ ವರ್ತಕರೂ ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ - ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು ದನ ಮುಂತಾದ ಸೊತ್ತನ್ನು ಅಪಹರಿಸಿ ಅಪಾರವಾದ ಆಸ್ತಿಯನ್ನು ಸುಲಿದುಕೊಂಡುಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯಾ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಶೆಬ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲು ಬಂದಿರುವಿಯಾ? ಬೆಳ್ಳಿಬಂಗಾರಗಳನ್ನೂ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ಕೊಳ್ಳೆಹೊಡೆಯಲು ನಿನ್ನ ಸೈನ್ಯಸಮೇತವಾಗಿ ಬಂದಿರುವೆಯಾ?’” ಎಂದು ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಶೆಬ, ದೆದಾನ್ ಮತ್ತು ತಾರ್ಷೀಷಿನ ವರ್ತಕರು, ಅವಳ ಎಲ್ಲಾ ಹಳ್ಳಿಗಳೊಂದಿಗೆ ಅಲ್ಲಿ ನಿನಗೆ, “ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದೆಯಾ? ಕೊಳ್ಳೆ ಹೊಡೆಯುವುದಕ್ಕಾಗಿಯೇ ನಿನ್ನ ತಂಡವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ಪಶುಗಳನ್ನೂ ಸಂಪತ್ತನ್ನೂ ತೆಗೆದುಕೊಂಡು ಮಹಾ ಸುಲಿಗೆ ತೆಗೆದುಕೊಳ್ಳಬೇಕೆಂದೋ?” ಎನ್ನುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:13
17 ತಿಳಿವುಗಳ ಹೋಲಿಕೆ  

ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.


“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”


ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.


ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು.


“ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


“ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,


ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.


ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.


ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು