Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಹೀಗಿರಲು ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನನ್ನ ಜನರಾದ ಇಸ್ರಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನನಗೆ ಗೊತ್ತಾಗುವುದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರಲು, ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜನರಾದ ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವದಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ಹೇಳು, ನನ್ನ ಒಡೆಯನಾಗಿರುವ ಯೆಹೋವನು ಹೀಗೆನ್ನುತ್ತಾನೆ: ‘ನನ್ನ ಜನರು ಸಮಾಧಾನದಿಂದಲೂ ಶಾಂತಿಯಿಂದಲೂ ಜೀವಿಸುತ್ತಿರುವಾಗ ನೀನು ಅವರನ್ನು ವಶಮಾಡಲು ಬಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:14
10 ತಿಳಿವುಗಳ ಹೋಲಿಕೆ  

ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.


ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.


ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,


ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”


“ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,


ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ,


ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು