Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:16
32 ತಿಳಿವುಗಳ ಹೋಲಿಕೆ  

“ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.


ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.


ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.


ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.


ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.


ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.


ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.


ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.


ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು