Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗೋಗನು ಇಸ್ರಯೇಲ್ ನಾಡಿನ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನು ಇಸ್ರೇಲಿನ ವಿರುದ್ಧವಾಗಿ ಯುದ್ಧಕ್ಕೆ ಬರುವಾಗ ನಾನು ಅವನ ಮೇಲೆ ಕೋಪೋದ್ರಿಕ್ತನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ, ನಾನು ರೋಷದಿಂದ ಬುಸುಗುಟ್ಟುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:18
8 ತಿಳಿವುಗಳ ಹೋಲಿಕೆ  

ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.


ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು