ಯೆಹೆಜ್ಕೇಲನು 38:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸಮುದ್ರಮತ್ಸ್ಯಗಳು ಆಕಾಶಪಕ್ಷಿಗಳು ಭೂಜಂತುಗಳು ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಭೂಮಂಡಲದ ಸಕಲಮನುಷ್ಯರೂ ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವವು, ಜರಿಗಳು ಕವಚಿಕೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಜೀವವುಳ್ಳ ಸಮಸ್ತವೂ ಹೆದರಿಕೆಯಿಂದ ನಡುಗುವವು. ನೀರಿನಲ್ಲಿರುವ ಮೀನುಗಳು, ಆಕಾಶದ ಪಕ್ಷಿಗಳು, ಭೂಮಿಯ ಮೇಲಿರುವ ಪ್ರಾಣಿಗಳು, ನೆಲದ ಮೇಲೆ ಹರಿದಾಡುವವುಗಳೆಲ್ಲಾ ಭೀತಿಯಿಂದ ನಡುಗುವವು. ಪರ್ವತಗಳು ಬಿದ್ದುಹೋಗುವವು, ಪ್ರತಿಯೊಂದು ಗೋಡೆಯು ನೆಲಕ್ಕೆ ಬಿದ್ದು ಹೋಗುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಸಮುದ್ರದ ಮೀನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವುವು; ಪರ್ವತಗಳು ಉರುಳಿಹೋಗುವುವು. ಝರಿಗಳು ಕವಚಿಕೊಳ್ಳುತ್ತಾ, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವುದು. ಅಧ್ಯಾಯವನ್ನು ನೋಡಿ |