Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಬ್ಬರನ್ನೊಬ್ಬರು ಕತ್ತಿಯಿಂದ ಕೊಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:21
9 ತಿಳಿವುಗಳ ಹೋಲಿಕೆ  

ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”


“ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.


ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.


ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.


ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.


ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು