Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:8
32 ತಿಳಿವುಗಳ ಹೋಲಿಕೆ  

ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.


“‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”


ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.


ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.


ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.


ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು.


ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು