ಯೆಹೆಜ್ಕೇಲನು 39:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕಾಡಿನಿಂದ ಸೌದೆಯನ್ನು ತರಬೇಕಾಗುವದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವದಿಲ್ಲ; ಆಯುಧಗಳನ್ನೇ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಅವರಿಗೆ ಅಡವಿಯಿಂದ ಮತ್ತು ಬಯಲಿನಿಂದ ಸೌದೆಯನ್ನು ತೆಗೆಯುವ ಅವಶ್ಯಕತೆ ಇರುವದಿಲ್ಲ. ಅವರು ಸತ್ತ ಸೈನಿಕರಿಂದ ಬೆಲೆಬಾಳುವ ವಸ್ತುಗಳನ್ನು ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |