Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತರುವಾಯ ಅವರು ನಾಡನ್ನು ಶುದ್ಧಿಮಾಡುವುದಕ್ಕೆ ತಕ್ಕವರನ್ನು ಆರಿಸಿ, ‘ನೀವು ನಾಡಿನಲ್ಲಿ ತಿರುಗಾಡುತ್ತಾ ನೆಲದ ಮೇಲೆ ಉಳಿದಿರುವ ಎಲುಬುಗಳನ್ನು ಹೂಣಿಡಿ’ ಎಂದು ನಿಯತವಾಗಿ ನೇಮಿಸುವರು; ಏಳು ತಿಂಗಳು ಕಳೆದ ಕೂಡಲೆ, ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಅವರು ದೇಶವನ್ನು ಶುದ್ಧಿಮಾಡುವದಕ್ಕೆ ತಕ್ಕವರನ್ನು ಆರಿಸಿ - ನೀವು ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ವಿುಕ್ಕಿರುವ ಎಲುಬುಗಳನ್ನು ಹೂಣಿಡಿರೆಂದು ನಿಯತವಾಗಿ ನೇವಿುಸುವರು; ಏಳು ತಿಂಗಳು ಕಳೆದ ಕೂಡಲೆ ಇವರು ಈ ಹುಡುಕುವ ಕೆಲಸವನ್ನು ತೊಡಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಹೆಣಗಳನ್ನು ಹೂಳಿಟ್ಟು ದೇಶವನ್ನು ಶುದ್ಧಗೊಳಿಸುವ ಕೆಲಸಗಾರರಿಗೆ ಖಾಯಂ ಕೆಲಸ ಕೊಡಲಾಗುವದು. ಅವರು ದೇಶದಲ್ಲೆಲ್ಲಾ ಹೆಣಗಳನ್ನು ಹುಡುಕಿ ತೆಗೆಯುವರು. ಅವರಿಗೆ ಏಳು ತಿಂಗಳು ಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹೂಳಿಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನಿರಂತರವಾಗಿ ನೇಮಿಸುವರು. “ ‘ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:14
4 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.


ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.


ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು