Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಇಸ್ರಾಯೇಲ್ ವಂಶದವರು ನಾನೇ ತಮ್ಮ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:22
10 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


“‘ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು’” ಇದು ಕರ್ತನಾದ ಯೆಹೋವನ ನುಡಿ.


ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


“ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು