Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:25
31 ತಿಳಿವುಗಳ ಹೋಲಿಕೆ  

“‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.


ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.


ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.


ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”


ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.


ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.


ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ,


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.


ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”


ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.


ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು