Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು; ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬೈಲಿಗೆ ಹೊರಟು ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು; ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರುಷಗಳ ತನಕ ಸುಡುತ್ತಲೇ ಬರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆ ಸಮಯದಲ್ಲಿ ಇಸ್ರೇಲಿನ ನಗರಗಳಲ್ಲಿ ವಾಸಿಸುವ ಜನರು ಹೊರಗೆ ಬಯಲಿಗೆ ಹೋಗುವರು. ಅಲ್ಲಿ ಅವರು ವೈರಿಗಳ ಆಯುಧಗಳನ್ನು ಕೂಡಿಸಿ ಸುಟ್ಟುಬಿಡುವರು. ಎಲ್ಲಾ ಬಿಲ್ಲುಬಾಣಗಳನ್ನು, ಗುರಾಣಿ, ಬರ್ಜಿ, ಗದೆಗಳನ್ನೆಲ್ಲಾ ಬೆಂಕಿಯಲ್ಲಿ ಹಾಕುವರು. ಏಳು ವರ್ಷಗಳ ತನಕ ಈ ಆಯುಧಗಳನ್ನು ಸೌದೆಯಾಗಿ ಉಪಯೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:9
8 ತಿಳಿವುಗಳ ಹೋಲಿಕೆ  

ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”


ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.


ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.


ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.


ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು