Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ನನಗೆ, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಅವರು, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ. ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ನನಗೆ - ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉಪಯೋಗಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೊ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ದೇವರು ನನಗೆ, “ಸರಿ! ಹಾಗಾದರೆ, ರೊಟ್ಟಿಯನ್ನು ಮಾಡುವದಕ್ಕಾಗಿ ಮನುಷ್ಯನ ಮಲದ ಬದಲಾಗಿ ದನದ ಒಣಗಿದ ಸಗಣಿಯನ್ನು ಉಪಯೋಗಿಸು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವರು ನನಗೆ, “ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ಬಳಸಲು ನಿನಗೆ ಅನುಮತಿಸಿದ್ದೇನೆ. ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:15
4 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,


ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.


ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.


ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು