Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ಯೆರೂಸಲೇವಿುನಲ್ಲಿ ಜೀವನಾಧಾರವನ್ನು ಮುರಿದುಬಿಡುವೆನು, ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಬೆದರಿನಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ಬೆರಗಾಗಿ ಕುಡಿಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಬಹಳವಾಗಿ ಚಿಂತಿಸುವರು. ಅವರಿಗೆ ಸ್ವಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:16
18 ತಿಳಿವುಗಳ ಹೋಲಿಕೆ  

ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.


“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.


ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.


ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.


ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,


ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.


ಆತನು ನನಗೆ, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ” ಎಂದು ಉತ್ತರಕೊಟ್ಟನು.


ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.


ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು