Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:3
13 ತಿಳಿವುಗಳ ಹೋಲಿಕೆ  

ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”


ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”


ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.


ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.


ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.


ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.


ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು