ಯೆಹೆಜ್ಕೇಲನು 40:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
2 ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.
2 ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.
2 ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂತು. ತೆಂಕಲಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡವು ಕಾಣಿಸಿತು.
2 ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.
ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.
ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.