Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೊರಗಣ ಅಂಗಳದ ಉತ್ತರ ಮತ್ತು ಪೂರ್ವಕ್ಕಿರುವ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ನೂರು ಮೊಳ ಅಳತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೊರಗಣ ಪ್ರಾಕಾರದ ಬಡಗಣ ಮೂಡಣ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಪ್ರಾಕಾರಕ್ಕೂ ಹೆಬ್ಬಾಗಿಲುಗಳು ಇದ್ದವು. ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ಐವತ್ತು ಮೀಟರ್ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 [ಹೊರಗಣ ಪ್ರಾಕಾರದ] ಬಡಗಣ ಮೂಡಣ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಪ್ರಾಕಾರಕ್ಕೂ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿಂದ ಎದುರು ಬಾಗಿಲಿಗೆ ನೂರು ಮೊಳ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪ್ರಾಕಾರದ ಹೊರಗೆ ಉತ್ತರದ ಪ್ರವೇಶ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಹೋಗಲು ದ್ವಾರವಿತ್ತು. ಇದು ಪೂರ್ವದಲ್ಲಿದ್ದ ದ್ವಾರದಂತಿತ್ತು. ಅವನು ಒಳಗೋಡೆಯ ದ್ವಾರದಿಂದ ಹೊರಗೋಡೆಯ ದ್ವಾರದ ತನಕ ಅಳೆದಾಗ, ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಒಳಗಿನ ಅಂಗಳದ ಬಾಗಿಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಿಲಿಗೆ ಎದುರಾಗಿತ್ತು. ಅವನು ಬಾಗಿಲಿನಿಂದ ಬಾಗಿಲಿಗೆ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:23
6 ತಿಳಿವುಗಳ ಹೋಲಿಕೆ  

ಅವನು ಪೂರ್ವಕ್ಕೂ, ಉತ್ತರಕ್ಕೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಅಂಗಳದ ಹೊರಗಡೆಯ ತನಕ ಅಳೆಯಲು, ಅದು ನೂರು ಮೊಳವಿತ್ತು.


ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು.


ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು