Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆಗ ಅವನು ನನಗೆ - ತೆಂಕಲಿಗೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಪಾರುಪತ್ಯವನ್ನು ನಡಿಸುವ ಯಾಜಕರಿಗೆ ನೇಮಕವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:45
18 ತಿಳಿವುಗಳ ಹೋಲಿಕೆ  

ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು.


ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.


ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.


ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.


ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.


ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.


ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.


ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು