Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ದ್ವಾರಮಂಟಪದ ಉದ್ದ ಹತ್ತು ಮೀಟರ್, ಅಗಲ ಐದುವರೆ ಮೀಟರ್ ಇದ್ದವು. ಹತ್ತು ಮೆಟ್ಟಲುಗಳನ್ನು ಹತ್ತಿ ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ನಿಲವುಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು; ಹತ್ತು ಮೆಟ್ಲುಗಳನ್ನು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಎರಡು ಕಡೆಯ ನಿಲವುಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಕೈಸಾಲೆಯು ಇಪ್ಪತ್ತು ಮೊಳ ಅಗಲ ಮತ್ತು ಹನ್ನೆರಡು ಮೊಳ ಉದ್ದವಾಗಿತ್ತು. ಆ ಕೈಸಾಲೆಯನ್ನು ಹತ್ತಲು ಹತ್ತು ಮೆಟ್ಟಿಲುಗಳಿದ್ದವು. ಕೈಸಾಲೆಯ ಇಕ್ಕೆಡೆಗಳಲ್ಲಿಯೂ ಗೋಡೆಗಳಿಗೆ ಸ್ತಂಭಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ದ್ವಾರಮಂಟಪದ ಅಗಲವು ಸುಮಾರು ಹನ್ನೊಂದು ಮೀಟರ್ ಮತ್ತು ಮುಂಭಾಗದಿಂದ ಹಿಂಭಾಗಕ್ಕೆ ಸುಮಾರು ಆರು ಮೀಟರ್. ಅದನ್ನು ಹತ್ತಲು ಮೆಟ್ಟಿಲುಗಳಿದ್ದವು ಮತ್ತು ಎರಡೂ ಬದಿಗಳಲ್ಲಿ ಬಾಗಿಲಿನ ಚೌಕಟ್ಟುಗಳ ಬದಿಗಳಲ್ಲಿ ಕಂಬಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:49
8 ತಿಳಿವುಗಳ ಹೋಲಿಕೆ  

ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.


ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.


ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಅಂಗಳಕ್ಕೆ ಅಭಿಮುಖವಾಗಿತ್ತು. ಅದರ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು. ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.


ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು