Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು ಮೆಟ್ಟಲುಗಳನ್ನು ಹತ್ತಿ ಹೊಸ್ತಿಲಿನ ಅಗಲವನ್ನು ಅಳೆದನು. ಒಂದೊಂದು ಹೊಸ್ತಿಲಿನ ಅಗಲವು ಮೂರು ಮೀಟರ್ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಅವನು ಮೂಡಣ ಹೆಬ್ಬಾಗಿಲಿಗೆ ಬಂದು ಮೆಟ್ಲುಗಳನ್ನು ಹತ್ತಿ ಹೊಸ್ತಲಿನ ಅಗಲವನ್ನು ಒಂದು ಕೋಲಳೆದನು. ಒಂದೊಂದು ಹೊಸ್ತಲಿನ ಅಗಲವು ಒಂದೊಂದು ಕೋಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಪೂರ್ವದ ದ್ವಾರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಬಳಿಗೆ ಹೋಗಿ ದ್ವಾರದ ಅಗಲವನ್ನು ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಮೇಲೆ ಅವನು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಬಾಗಿಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಿಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:6
24 ತಿಳಿವುಗಳ ಹೋಲಿಕೆ  

ಆಮೇಲೆ ಆತನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿಗೆ ಕರೆದುಕೊಂಡು ಹೋದನು.


ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಇದಲ್ಲದೆ ಹೊರಗಣ ಅಂಗಳದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಮತ್ತು ಉದ್ದವನ್ನೂ ಅಳೆದನು.


ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.


ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.


ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.


ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.


ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.


ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.


ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.


ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.


ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.


ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಿಲುಗಳಿದ್ದವು. ಕೈಸಾಲೆಯ ಎರಡು ಪಕ್ಕದ ಕಂಬಗಳಲ್ಲಿ ಖರ್ಜೂರ ಮರಗಳ ಚಿತ್ರಗಳಿದ್ದವು.


ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಆ ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು.


ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.


ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು.


ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳೆದನು.


ಅವನು ಬಾಗಿಲುಗಳ ಕಂಬಗಳನ್ನೂ, ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳೆದನು.


ಆ ಪುರುಷನು ಒಳಗಿನ ಆಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಆಲಯದ ಸುತ್ತಲೂ ಅಳತೆ ಮಾಡಿದನು.


ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು