Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಪುರುಷ ಅಳೆದಾಗ ದೇವಸ್ಥಾನದ ಉದ್ದ ಐವತ್ತು ಮೀಟರ್, ದೀಕ್ಷಿತರ ಪ್ರಾಕಾರ, ಶಾಲೆಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ಐವತ್ತು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಪುರುಷನು ಅಳೆಯಲು ದೇವಸ್ಥಾನದ ಉದ್ದ ನೂರು ಮೊಳವೂ ದೀಕ್ಷಿತರ ಪ್ರಾಕಾರ, ಶಾಲೆ, ಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ನೂರು ಮೊಳವೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ಅವನು ಆಲಯದ ಅಳತೆ ತೆಗೆದನು. ಆಲಯವು ನೂರು ಮೊಳ ಉದ್ದವಾಗಿತ್ತು. ನಿಯಮಿತದ ಸ್ಥಳ, ಅದರ ಕಟ್ಟಡ ಮತ್ತು ಗೋಡೆಯ ಸಹಿತ ನೂರು ಮೊಳ ಉದ್ದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದೂ ಅಳೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:13
8 ತಿಳಿವುಗಳ ಹೋಲಿಕೆ  

ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು.


ಪಶ್ಚಿಮದಲ್ಲಿ ಪ್ರತ್ಯೇಕಿಸಿದ ಸ್ಥಳದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳವೂ, ಉದ್ದ ತೊಂಭತ್ತು ಮೊಳವೂ, ಅದರ ಗೋಡೆಯ ದಪ್ಪ ಐದು ಮೊಳವಾಗಿತ್ತು.


ಇದಲ್ಲದೆ ದೇವಸ್ಥಾನದ ಮುಂಭಾಗ ಮತ್ತು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳ ಇವುಗಳ ಒಟ್ಟು ಅಗಲ ನೂರು ಮೊಳವಾಗಿದ್ದವು.


ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.


ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು.


ನೂರು ಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಿಲಿನ ಅಗಲವು ಐವತ್ತು ಮೊಳವಾಗಿತ್ತು.


ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿನ ಉದ್ದ ಐವತ್ತು ಮೊಳವು, ದೇವಸ್ಥಾನದ ಎದುರಿಗಿರುವ ಕೋಣೆಗಳ ಸಾಲಿನ ಉದ್ದ ನೂರು ಮೊಳವಾಗಿತ್ತು.


ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು