Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಚೌಕಗಳಲ್ಲಿ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ವೃಕ್ಷ; ಒಂದೊಂದು ಕೆರೂಬಿಗೆ ಎರಡೆರಡು ಮುಖ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 [ಆ ಚೌಕಗಳಲ್ಲಿ] ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ವೃಕ್ಷ; ಒಂದೊಂದು ಕೆರೂಬಿಗೆ ಎರಡೆರಡು ಮುಖ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆರೂಬಿದೂತರ ಮತ್ತು ಖರ್ಜೂರ ವೃಕ್ಷಗಳ ಚಿತ್ರ ಬಿಡಿಸಲ್ಪಟ್ಟಿತ್ತು. ಎರಡು ಕೆರೂಬಿದೂತರ ನಡುವೆ ಒಂದು ಖರ್ಜೂರ ವೃಕ್ಷವಿತ್ತು. ಪ್ರತಿ ಕೆರೂಬಿದೂತರಿಗೆ ಎರಡು ಮುಖಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದು ಕೆರೂಬಿಗಳು ಮತ್ತು ಖರ್ಜೂರದ ಮರಗಳ ಚಿತ್ರಗಳಿಂದ ಕೂಡಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಮತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:18
16 ತಿಳಿವುಗಳ ಹೋಲಿಕೆ  

ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.


ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.


ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು.


ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.


ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.


ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.


ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು.


ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು.


ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.


ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.


ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು.


ದ್ವಾರದಿಂದ ಗರ್ಭಗೃಹದವರೆಗೂ ಮತ್ತು ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲೂ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿಗಿದ್ದವು.


ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು