Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಚಿತ್ರಿತ ಖರ್ಜೂರ ವೃಕ್ಷಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ [ಚಿತ್ರಿತ] ಖರ್ಜೂರ ವೃಕ್ಷಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇದಕ್ಕೆ ತೆರೆಯಲಾಗದ ಕಿಟಕಿಗಳಿದ್ದವು. ಇದರ ಗೋಡೆಗಳಲ್ಲಿಯೂ ಗೋಡೆಯ ಮೇಲಿದ್ದ ಸೂರು ಮತ್ತು ಆಲಯದ ಸುತ್ತಲಿದ್ದ ಕೋಣೆಯ ಗೋಡೆಗಳಲ್ಲಿಯೂ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗಣದ ಪಕ್ಕಕ್ಕೂ ಆಲಯದ ಪಕ್ಕದ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪದ ಹಲಗೆಗಳೂ ಸಹ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:26
7 ತಿಳಿವುಗಳ ಹೋಲಿಕೆ  

ಅವನು ಬಾಗಿಲುಗಳ ಕಂಬಗಳನ್ನೂ, ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳೆದನು.


ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.


ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.


ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.


ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯನ್ನು ಎಂಟು ಮೊಳವೆಂದೂ; ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು. ಹೆಬ್ಬಾಗಿಲಿನ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.


ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು.


ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು