ಯೆಹೆಜ್ಕೇಲನು 41:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ, ಮಹಾಪರಿಶುದ್ಧ ಸ್ಥಳದ ಕಂಬಗಳನ್ನು ಅಳತೆ ಮಾಡಲು ದ್ವಾರದ ಒಂದೊಂದು ಕಂಬದ ಅಗಲ ಎರಡೆರಡು ಮೊಳಗಳೂ, ದ್ವಾರದ ಅಗಲವು ಆರು ಮೊಳಗಳೂ, ದ್ವಾರದ ಪಕ್ಕದ ಗೋಡೆಗಳ ಅಗಲವು ಏಳು ಮೊಳವೆಂದು ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಮೇಲೆ ಆ ಪುರುಷ ಇನ್ನೂ ಮುಂದಕ್ಕೆ ಹೋಗಿ ಪರಿಶುದ್ಧ ಸ್ಥಳದ ಕೊನೆಯಲ್ಲಿ ಗರ್ಭಗೃಹವನ್ನು ಅಳೆಯಲು ದ್ವಾರದ ಒಂದೊಂದು ನಿಲವುಕಂಬದ ಅಗಲ ಒಂದೊಂದು ಮೀಟರ್, ದ್ವಾರದ ಅಗಲ ಮೂರು ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ ಪರಿಶುದ್ಧ ಸ್ಥಳದ ಕೊನೆಯಲ್ಲಿ [ಗರ್ಭಗೃಹವನ್ನು] ಅಳೆಯಲು ದ್ವಾರದ ಒಂದೊಂದು ನಿಲವುಕಂಬದ ಅಗಲ ಎರಡೆರಡು ಮೊಳ, ದ್ವಾರದ ಅಗಲ ಆರು ಮೊಳ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಮೇಲೆ ಅವನು ಕೊನೆಯ ಕೋಣೆಗೆ ಪ್ರವೇಶಿಸಿದನು. ಅದರ ಬಾಗಿಲಿನ ಇಕ್ಕೆಡೆಗಳಲ್ಲಿರುವ ಗೋಡೆಗಳನ್ನು ಅವನು ಅಳತೆ ಮಾಡಿದನು. ಆ ಗೋಡೆಗಳು ಎರಡು ಮೊಳ ದಪ್ಪವಾಗಿದ್ದು ಏಳು ಮೊಳ ಅಗಲವಾಗಿದ್ದವು. ದ್ವಾರವು ಆರು ಮೊಳ ಅಗಲವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅನಂತರ ಅವನು ಒಳಗೆ ಹೋಗಿ ಪರಿಶುದ್ಧಸ್ಥಳದ ಪ್ರವೇಶದ್ವಾರದ ಕಂಬಗಳನ್ನು ಅಳೆದನು; ಒಂದೊಂದು ಕಂಬವು ಸುಮಾರು ಒಂದು ಮೀಟರ್ ಅಗಲವಿತ್ತು. ಪ್ರವೇಶದ್ವಾರವು ಸುಮಾರು ಮೂರು ಮೀಟರ್ ಅಗಲವಾಗಿತ್ತು ಮತ್ತು ಅದರ ಎರಡೂ ಬದಿಯ ಗೋಡೆಯು ಸುಮಾರು ನಾಲ್ಕು ಮೀಟರ್ ಅಗಲವಾಗಿತ್ತು. ಅಧ್ಯಾಯವನ್ನು ನೋಡಿ |