Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತು ಆಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು; ದೇವಸ್ಥಾನದ ಗೋಡೆಯು ಮೆಟ್ಟಿಲುಗಳಿಂದ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ರಂಧ್ರವಿಲ್ಲದೆ ಆ ಮೆಟ್ಟಿಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು. ಆದರೆ ಮನೆಯ ಗೋಡೆಗೆ ಯಾವ ಆಧಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಕೊಠಡಿಗಳು ಒಂದರ ಮೇಲೆ ಮೇಲೊಂದು ಮೂರಂತಸ್ತಾಗಿದ್ದವು. ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ದೇವಸ್ಥಾನದ ಗೋಡೆಯನ್ನು ಮೆಟ್ಟಲು ಮೆಟ್ಟಲಾಗಿ ಕಟ್ಟಲಾಗಿತ್ತು. ಗೋಡೆಯಲ್ಲಿ ತೂತಿಲ್ಲದೆ ಆ ಮೆಟ್ಟಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಕೊಠಡಿಗಳು ಒಂದರ ಮೇಲೊಂದು ಮೂರಂತಸ್ತಾಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತಿದ್ದವು; ದೇವಸ್ಥಾನದ ಗೋಡೆಯು ಮೆಟ್ಲು ಮೆಟ್ಲಾಗಿ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ತೂತಿಲ್ಲದೆ ಆ ಮೆಟ್ಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಅಧಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಕೋಣೆಗಳು ಒಂದರ ಮೇಲೊಂದು ಮೂರು ಅಂತಸ್ತಿನಲ್ಲಿದ್ದವು. ಪ್ರತಿ ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು. ಆಲಯದ ಗೋಡೆಯು ಮೆಟ್ಟಿಲು ಮೆಟ್ಟಿಲುಗಳಾಗಿ ಕಟ್ಟಲ್ಪಟ್ಟಿತ್ತು. ಪಕ್ಕದ ಕೋಣೆಗಳು ಈ ಮೆಟ್ಟಿಲುಗಳ ಮೇಲೆ ಆಧಾರಗೊಂಡಿದ್ದವು. ಅವು ಆಲಯದ ಗೋಡೆಯನ್ನು ಆಧಾರ ಮಾಡಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತಾಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ಪಕ್ಕದ ಕೋಣೆಗಳಿಗೆ ಆಧಾರವಾಗಿ ದೇವಾಲಯದ ಗೋಡೆಯ ಸುತ್ತಲೂ ಮುಂಚಾಚಿರುವಿಕೆಗಳು ಇದ್ದವು. ಇದರಿಂದಾಗಿ ಪೋಷಕ ಭಾಗಗಳನ್ನು ದೇವಾಲಯದ ಗೋಡೆಯೊಳಗೆ ಸೇರಿಸಲಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:6
6 ತಿಳಿವುಗಳ ಹೋಲಿಕೆ  

ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.


ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.


ಕೋಣೆಗಳು ಮೂರು ಅಂತಸ್ತಾಗಿದ್ದವು. ಹೊರಗಿನ ಅಂಗಳದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಪಡಸಾಲೆಗಳಿರಲಿಲ್ಲ. ಆದುದರಿಂದ ನೆಲದಿಂದ ಎತ್ತರದಲ್ಲಿದ್ದ ಮೇಲಿನ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗಿಂತ ಚಿಕ್ಕದಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು